Sunday, June 7, 2026
Homeಕರಾವಳಿಉಡುಪಿಉಡುಪಿ; ಬೈಕ್ ಗೆ ಟಿಪ್ಪರ್ ಡಿಕ್ಕಿ ; ಯಕ್ಷಗಾನ ಕಲಾವಿದ ಸಾವು

ಉಡುಪಿ; ಬೈಕ್ ಗೆ ಟಿಪ್ಪರ್ ಡಿಕ್ಕಿ ; ಯಕ್ಷಗಾನ ಕಲಾವಿದ ಸಾವು

- Advertisement -
- Advertisement -

ಉಡುಪಿ; ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ಉಡುಪಿ  ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ.ಬ್ರಹ್ಮಾವರ ಮಟಪಾಡಿಯ ಪ್ರಭಾಕರ ಆಚಾರ್ಯ(62) ಮೃತ ದುರ್ದೈವಿ.

 ಅಪಘತಾದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಹ ಸವಾರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಭಾಕರ ಆಚಾರ್ಯ ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆ ಕಡೆ ಬರುತ್ತಿದ್ದಾಗ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಲಾರಿಯ ಚಕ್ರದಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪ್ರಭಾಕರ ಆಚಾರ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಟಪಾಡಿ ಪ್ರಭಾಕರ ಆಚಾರ್ಯ ಮಟಪಾಡಿ ಶ್ರೀ ನಂದಿಕೇಶ್ವರ ಯಕ್ಷಗಾನ ಮಂಡಳಿ ಅಧ್ಯಕ್ಷರಾಗಿದ್ದು, ಪ್ರಭುದ್ಧ ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!