Thursday, June 4, 2026
Homeತಾಜಾ ಸುದ್ದಿನೇಹಾ ಹಿರೇಮಠ ಕೊಲೆ ಪ್ರಕರಣ: ನಟ ರಿಷಬ್‌ ಶೆಟ್ಟಿ, ರಚಿತಾ ರಾಮ್‌ ಖಂಡನೆ

ನೇಹಾ ಹಿರೇಮಠ ಕೊಲೆ ಪ್ರಕರಣ: ನಟ ರಿಷಬ್‌ ಶೆಟ್ಟಿ, ರಚಿತಾ ರಾಮ್‌ ಖಂಡನೆ

- Advertisement -
- Advertisement -

ಬೆಂಗಳೂರು: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ ಹುಬ್ಬಳ್ಳಿ ಕಾಲೇಜಿನ ಎಂಸಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ನಟ ರಿಷಬ್‌ ಶೆಟ್ಟಿ ಮತ್ತು ನಟಿ ರಚಿತಾ ರಾಮ್‌ ಖಂಡಿಸಿದ್ದಾರೆ. 

ರಚಿತಾ ರಾಮ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ನಲ್ಲಿ ‘ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೇ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ’ ಎಂದು ಟ್ವೀಟ್ ಮಾಡಿದ್ದಾರೆ.  

ರಿಷಬ್‌ ಶೆಟ್ಟಿ ತಮ್ಮ ‘ಎಕ್ಸ್‌’ ಖಾತೆಯಲ್ಲಿ ‘ನೇಹಾ ಹಿರೇಮಠ ಅವರ ಕೊಲೆ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ. #JusticeForNeha’ ಎಂದು ಪೋಸ್ಟ್‌ ಮಾಡಿದ್ದಾರೆ. 

- Advertisement -

Latest News

error: Content is protected !!