Thursday, June 4, 2026
Homeಕರಾವಳಿಕಡಬದಲ್ಲಿ ಕ್ಯಾ. ಬ್ರಿಜೇಶ್ ಚೌಟ ಪರ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್ ಶೋ

ಕಡಬದಲ್ಲಿ ಕ್ಯಾ. ಬ್ರಿಜೇಶ್ ಚೌಟ ಪರ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್ ಶೋ

- Advertisement -
- Advertisement -

ಕಡಬ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರವಾಗಿ ಇಂದು ಕಡಬದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.‌ ಅಣ್ಣಾಮಲೈ ಚುನಾವಣಾ ಪ್ರಚಾರ ನಡೆಸಿದರು.

ಕಡಬಕ್ಕೆ ಹೆಲಿಕಾಫ್ಟರ್ ಮೂಲಕ ಆಗಮಿಸಿದ ಅಣ್ಣಾಮಲೈ ಅವರನ್ನು ಹೆಲಿಪ್ಯಾಡ್ ನಲ್ಲಿ ಬಿಜೆಪಿ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು.‌ಕಡಬದ ಎಪಿಎಂಸಿ ಪ್ರಾಂಗಣದಿಂದ ಮುಖ್ಯ ಪೇಟೆಯವರೆಗೆ ಅಣ್ಣಾಮಲೈ ರೋಡ್ ಶೋ ನಡೆಸಿ ಮತ ಯಾಚನೆ ಮಾಡಿದರು.

ರೋಡ್ ಶೋ ನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮೊದಲಾದವರು ಭಾಗಿಯಾಗಿದ್ದರು.

- Advertisement -

Latest News

error: Content is protected !!