Saturday, June 6, 2026
HomeUncategorizedನೇಹಾ ಕೊಲೆ ಪ್ರಕರಣ; ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ ಪ್ರಕರಣ; ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

- Advertisement -
- Advertisement -

ಹುಬ್ಬಳ್ಳಿಯ ವಿದ್ಯಾರ್ಥಿನಿ  ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ‌ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!