Saturday, June 13, 2026
Homeತಾಜಾ ಸುದ್ದಿಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.  ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಡಿಸ್ಚಾರ್ಜಾಗಿ ಮನೆಗೆ ಬಂದಿದ್ದರು, ಆದರೆ ಇದೀಗ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಎಸ್​ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!