Saturday, October 10, 2026
Homeತಾಜಾ ಸುದ್ದಿಮಹಾರಾಷ್ಟ್ರ: ಒಂದೇ ದಿನ 30 ಪೊಲೀಸ್ ಸಿಬ್ಬಂದಿಗಳಿಗೆ ಸೋಂಕು ದೃಢ, 4 ಸಾವು

ಮಹಾರಾಷ್ಟ್ರ: ಒಂದೇ ದಿನ 30 ಪೊಲೀಸ್ ಸಿಬ್ಬಂದಿಗಳಿಗೆ ಸೋಂಕು ದೃಢ, 4 ಸಾವು

- Advertisement -
- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ಮಾರಕ ಕೊರೊನಾ ಸೋಂಕು ಪೊಲೀಸರಿಗೆ ಬೆಂಬಿಡದೇ ಕಾಡುತ್ತಿದೆ. ಒಂದೇ ದಿನ 30 ಮಂದಿಗೆ ಸೋಂಕು ದೃಢಪಟ್ಟಿದ್ದು, ಕಿಲ್ಲರ್ ಸೋಂಕಿಗೆ ನಾಲ್ವರು ಬಲಿಯಾದ್ದಾರೆ.

ಮಹಾರಾಷ್ಟ್ರ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 30 ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ.

ಇನ್ನು ಮಹಾರಾಷ್ಟ್ರದಲ್ಲಿ ಈವರೆಗೆ ಮಾರಕ ಕೊರೊನಾ ಸೋಂಕು ಪೀಡಿತ ಪೊಲೀಸ್ ಸಿಬ್ಬಂದಿ ಸಂಖ್ಯೆ 5205ಕ್ಕೆ ಏರಿಕೆಯಾಗಿದೆ. ಈ ಪೈಕಿ 4071 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ 1070 ಮಂದಿ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!