Friday, June 5, 2026
Homeಕರಾವಳಿಮಂಗಳೂರುನಿಷೇಧಿತ ಮಾದಕವಸ್ತು ಮಾರಾಟ ಆರೋಪ; ಮಂಗಳೂರು ಸಿಸಿಬಿ ಪೊಲೀಸರಿಂದ ಇಬ್ಬರು ಅರೆಸ್ಟ್

ನಿಷೇಧಿತ ಮಾದಕವಸ್ತು ಮಾರಾಟ ಆರೋಪ; ಮಂಗಳೂರು ಸಿಸಿಬಿ ಪೊಲೀಸರಿಂದ ಇಬ್ಬರು ಅರೆಸ್ಟ್

- Advertisement -
- Advertisement -

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಎಂಬಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು,ಆರೋಪಿಗಳಿಂದ ಒಟ್ಟು 16 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಳ್ಳಾಲದ ಮೊಹಮ್ಮದ್ ಇಶಾನ್ ಮತ್ತು ಜಾಫರ್ ಸಾಧಿಕ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನಿಂದ ಮಾದಕವಸ್ತು ಖರೀದಿಸಿ ತಂದಿದ್ದರು ಎಂದು ಹೇಳಲಾಗಿದೆ.

ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

407 ಗ್ರಾಂ ತೂಕದ ಎಂಡಿಎಂಎ ಕೃತ್ಯಕ್ಕೆ ಬಳಸಿದ ಕಾರು ಮತ್ತು ಮೊಬೈಲ್ ಫೋನ್ ಗಳನ್ನೂ ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!