Saturday, June 6, 2026
Homeಅಪರಾಧಕಾರು ಢಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು

ಕಾರು ಢಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು

- Advertisement -
- Advertisement -

ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್‌ (46) ಮೃತಪಟ್ಟ ವ್ಯಕ್ತಿ.

ಆಟೋ ಎಲೆಕ್ಟ್ರೀಷಿಯನ್‌ ಕೆಲಸ ನಡೆಸುತ್ತಿದ್ದ ಶ್ರೀಕಾಂತ್‌ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಶ್ರೀಕಾಂತ್‌ ಅವರನ್ನು ಅಪಘಾತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫ‌ಲಕೊಡದೆ ಮೃತಪಟ್ಟಿದ್ದಾರೆ.

ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!