Saturday, June 6, 2026
Homeಪ್ರಮುಖ-ಸುದ್ದಿಶಾಸಕ ಹೆಚ್.ಡಿ. ರೇವಣ್ಣ ಬಂಧನದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಗೆ ಎಸ್ಐಟಿ ಮಾಹಿತಿ

ಶಾಸಕ ಹೆಚ್.ಡಿ. ರೇವಣ್ಣ ಬಂಧನದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಗೆ ಎಸ್ಐಟಿ ಮಾಹಿತಿ

- Advertisement -
- Advertisement -

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್.ಡಿ. ರೇವಣ್ಣ ಬಂಧನ ಮಾಡಲ್ಪಟ್ಟಿರುವ ಬಗ್ಗೆ ವಿಧಾನಸಭೆ ಸ್ಪೀಕರ್ ಗೆ ಅಧಿಕೃತ ಮಾಹಿತಿ ನೀಡಲಾಗಿದೆ.

ಬಂಧನದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಎಸ್ ಐಟಿ ಅಧಿಕಾರಿಗಳು ಇ-ಮೇಲ್ ಮೂಲಕ ಮಾಹಿತಿ ರವಾನಿಸಿದ್ದಾರೆ.

ಹೆಚ್.ಡಿ. ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಹಿನ್ನೆಲೆಯಲ್ಲಿ ಬಂಧನದ ಕುರಿತು ಸ್ಪೀಕರ್ ಗೆ ಮಾಹಿತಿ ನೀಡಲಾಗಿದೆ.

ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಲ್ಪಟ್ಟಿದ್ದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ರೇವಣ್ಣ ಅವರನ್ನು ಎಸ್ ಐಟಿ ಬಂಧಿಸಿತ್ತು.‌

- Advertisement -

Latest News

error: Content is protected !!