Saturday, June 13, 2026
Homeತಾಜಾ ಸುದ್ದಿಬೆಂಗಳೂರು: ಚುನಾವಣಾ ಒತ್ತಡದಿಂದ ರಿಲ್ಯಾಕ್ಸ್ ಮೂಡಿಗೆ ಜಾರಿದ ಸಿಎಂ; ಮೂರು ದಿನಗಳ ಕಾಲ ಊಟಿಯಲ್ಲಿ ಸಿದ್ದರಾಮಯ್ಯ ವಿಶ್ರಾಂತಿ

ಬೆಂಗಳೂರು: ಚುನಾವಣಾ ಒತ್ತಡದಿಂದ ರಿಲ್ಯಾಕ್ಸ್ ಮೂಡಿಗೆ ಜಾರಿದ ಸಿಎಂ; ಮೂರು ದಿನಗಳ ಕಾಲ ಊಟಿಯಲ್ಲಿ ಸಿದ್ದರಾಮಯ್ಯ ವಿಶ್ರಾಂತಿ

- Advertisement -
- Advertisement -

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಚುನಾವಣಾ ಒತ್ತಡದಿಂದ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಮೂರು ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ ಪಡೆಯಲು ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ.

ಹೆಚ್‍ಎಎಲ್‍ನಿಂದ ಮೈಸೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಊಟಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ.

ಇನ್ನು ಸಿದ್ದರಾಮಯ್ಯ ತೆರಳುವ ಮುನ್ನ ಸಚಿವರಿಂದ ಸಿಎಂ ಭೇಟಿ ನೀಡಿದ್ದಾರೆ. ಸಚಿವರಾದ ರಾಮಲಿಂಗಾರೆಡ್ಡಿ, ಮಹದೇವಪ್ಪ, ರಾಜಣ್ಣ ಅವರು ಭೇಟಿಯಾಗಿದ್ದು, ಅನೌಪಚಾರಿಕವಾಗಿ ಸಚಿವರ ಜೊತೆ ಸಿಎಂ ಚರ್ಚೆ ಮಾಡಿದ್ದಾರೆ. ಎರಡನೇ ಹಂತದ ಚುನಾವಣಾ ಮತದಾನ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆ ಹಾಗೂ ಪೆನ್‍ಡ್ರೈವ್ ಪ್ರಕರಣದ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!