Saturday, June 13, 2026
Homeತಾಜಾ ಸುದ್ದಿಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಆ ವೀಡಿಯೋ ನಿಮ್ಮ ಮೊಬೈಲ್ ನಲ್ಲಿದ್ದರೆ ನಿಮ್ಮೇಲೆ ಬೀಳುತ್ತೆ...

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಆ ವೀಡಿಯೋ ನಿಮ್ಮ ಮೊಬೈಲ್ ನಲ್ಲಿದ್ದರೆ ನಿಮ್ಮೇಲೆ ಬೀಳುತ್ತೆ ಕೇಸ್

- Advertisement -
- Advertisement -

ಬೆಂಗಳೂರು; ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಸದ್ಯ ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಜನರಿಗೆ ಎಸ್ಐಟಿ ಖಡಕ್ ಎಚ್ಚರಿಕೆ  ಕೊಟ್ಟಿದೆ. ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಮೊಬೈಲ್ ನಲ್ಲಿದ್ದು ಅದನ್ನು ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ ಯಾವದೇ ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

- Advertisement -

Latest News

error: Content is protected !!