Saturday, October 17, 2026
Homeತಾಜಾ ಸುದ್ದಿಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬಹಿರಂಗಗೊಳಿಸಿದ್ದ ಬಿಜೆಪಿ ಮುಖಂಡ ದೇವರಾಜೇ ಗೌಡ ಅರೆಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬಹಿರಂಗಗೊಳಿಸಿದ್ದ ಬಿಜೆಪಿ ಮುಖಂಡ ದೇವರಾಜೇ ಗೌಡ ಅರೆಸ್ಟ್

- Advertisement -
- Advertisement -

ಚಿತ್ರದುರ್ಗ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬಹಿರಂಗವಾಗಲು ಕಾರಣವಾಗಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಗುಹಿಲಾಳ್ ಟೋಲ್ ಬಳಿ ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರಿಗೆ ಹಾಸನ ಪೊಲೀಸರು ನೀಡಿದ್ದ ಮಾಹಿತಿ ಆಧರಿಸಿ ಬಂಧಿಸಲಾಗಿದೆ.ಠಾಣೆಗೆ ಕರೆದೊಯ್ದಿರುವ ಹಿರಿಯೂರು ಪೊಲೀಸರು ಹಾಸನ ಪೊಲೀಸರಿಗೆ ಒಪ್ಪಿಸಲಿದ್ದಾರೆ ಎಂದು ತಿಳಿದು ಬಂದಿದೆ.

ದೇವರಾಜೇಗೌಡ ಮೇಲೆ ಲೈಂಗಿಕ ಕಿರುಕುಳದ ಆರೋಪವಿದೆ. ಏಪ್ರಿಲ್ 1 ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಏಪ್ರಿಲ್ 1 ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ದೇವರಾಜೇಗೌಡ ತಮ್ಮ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಮತ್ತು ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯ ಪತಿ ಮಾರ್ಚ್ 30 ರಂದು ದೂರು ದಾಖಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರನ್ನು ಅರೆಸ್ಟ್ ಮಾಡಲಾಗಿದೆ.

- Advertisement -

Latest News

error: Content is protected !!