Sunday, June 7, 2026
Homeಕರಾವಳಿಬಂಟ್ವಾಳ : ಕಳ್ಳನೋಟು ಚಲಾವಣೆ ಮಾಡುತ್ತಿದ್ದ ಇಬ್ಬರ ಬಂಧನ

ಬಂಟ್ವಾಳ : ಕಳ್ಳನೋಟು ಚಲಾವಣೆ ಮಾಡುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಬಂಟ್ವಾಳ : ಕಳ್ಳನೋಟು ಚಲಾವಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.ಕಾಸರಗೋಡು ಮೂಲದ ಚುರಿಕುಡ್ಲು ನಿವಾಸಿ ಮುಹಮ್ಮದ್ ಹಾಗೂ ಕೂಡ್ಲು ನಿವಾಸಿ ಕಮರುನ್ನಿಸಾ ಬಂಧಿತ ಆರೋಪಿಗಳು. ಕಮರುನ್ನಿಸಾಳ ಪತಿ ಶರೀಫ್ ಎಂಬಾತ ಪರಾರಿಯಾಗಿರುವ ಇನ್ನೋರ್ವ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸ್ ನಿರೀಕ್ಷಕ ಆನಂತಪದ್ಮನಾಭ ನೇತೃತ್ವದ ಪೋಲೀಸರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಬಳಿ 500 ರೂ. ಮುಖಬೆಲೆಯ 40ಕ್ಕೂ ಅಧಿಕ ಖೋಟಾ ನೋಟುಗಳು ಪತ್ತೆಯಾಗಿವೆ. ಇನ್ನು ಕೃತ್ಯಕ್ಕೆ ಬಳಸಿದ ಕಾರು ಹಾಗೂ ಮೊಬೈಲ್ ಫೋನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!