Sunday, June 7, 2026
Homeಅಪರಾಧಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

- Advertisement -
- Advertisement -

ಬೆಂಗಳೂರು: ಇಲ್ಲಿನ ರಾಮನಗರದ ‌ಖಾಸಗಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಕನಕಪುರ ರಸ್ತೆ ಸೋಮನ ಹಳ್ಳಿಯಲ್ಲಿರುವ ಶಾಲೆಗೆ ಇ-ಮೇಲ್‌ಗೆ‌ ಆಗಂತುಕರು ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ, ಇದನ್ನು ಕಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ತಲಘಟ್ಟಪುರ ಪೊಲೀಸ್ ಠಾಣೆ ಸಿಬ್ಬಂದಿ, ರಾಮನಗರ ಜಿಲ್ಲಾ ಬಾಂಬ್ ಪತ್ತೆದಳ ಶಾಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಆದರೆ ಎಲ್ಲೂ ಸ್ಫೋಟಕ ವಸ್ತುಗಳು ಪತ್ತೆಯಾಗದ ನಿಟ್ಟಿನಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ ಆದರೂ ಅಧಿಕಾರಿಗಳು ಶಾಲೆಯ ಆವರಣ ಸುತ್ತ ಹಾಗೂ ತರಗತಿಗಳ ಒಳಗೆ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!