Thursday, June 4, 2026
Homeತಾಜಾ ಸುದ್ದಿಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

- Advertisement -
- Advertisement -

ವಾರಾಣಸಿ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಪ್ರತಿಪಾದಕರಾಗಿ ಪಂಡಿತ್ ಗಣೇಶ್ವರ್ ಶಾಸ್ತ್ರಿ, ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಹಾಗೂ ಸಂಜಯ್ ಸೋಂಕರ್ ಜೊತೆಗಿದ್ದರು.

ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸುವ ಮುನ್ನ ಬನಾರಸ್‌ನ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ನದಿಗೆ ಪೂಜೆ ಸಲ್ಲಿಸಿ ಬಳಿಕ ಕಾಲಭೈರವ ದೇವಾಲಯಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

2014ರಲ್ಲಿ ಮೊದಲ ಬಾರಿಗೆ ಗೆದ್ದಿದ್ದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಆಯ್ಕೆಯಾಗುವ ಭರವಸೆಯನ್ನು ಮೋದಿ ವ್ಯಕ್ತಪಡಿಸಿದ್ದಾರೆ. ಇನ್ನು ತಮ್ಮ ಏಕ್ಸ್ ಖಾತೆಯಲ್ಲಿ, ‘ಕಾಶಿಯೊಂದಿಗಿನ ನನ್ನ ಸಂಬಂಧ ಬೇರ್ಪಡಿಸಲಾಗದಂತದ್ದು. ಪದಗಳಲ್ಲಿ ಅದನ್ನು ವರ್ಣಿಸಲು ಸಾಧ್ಯವಿಲ್ಲ’ ಎಂದು ಅವರು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಾಲಭೈರವನ ದರ್ಶನದ ನಂತರ ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಲ್ಜೆಪಿ-ರಾಮ್ ವಿಲಾಸ್ ಮುಖ್ಯಸ್ಥ ಚಿರಾಗ್ ಪಾಸ್ವಾನ್, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!