- Advertisement -
![]()
- Advertisement -
ಮೈಸೂರು: ವಿಧಾನ ಪರಿಷತ್ ನೈಋತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿ ಮತ್ತು ಮೈಸೂರು ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ಅವರಿಗೆ ಇಬ್ಬರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮತ್ತು ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು
- Advertisement -


