Sunday, October 18, 2026
Homeತಾಜಾ ಸುದ್ದಿಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

- Advertisement -
- Advertisement -

ಬೆಂಗಳೂರು:ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಬಂಧನ ವಾರಂಟ್ ಹೊರಡಿಸಲಾಗಿದೆ.

ರೇವಣ್ಣ ವಿರುದ್ಧ ಈಗಾಗಲೇ ಹೊರಡಿಸಲಾಗಿರುವ ಲುಕ್ ಔಟ್ ನೋಟಿಸ್ ಮತ್ತು ಬ್ಲೂ ಕಾರ್ನರ್ ನೋಟಿಸ್ ಗಳ ಬಗ್ಗೆಯೂ ಎಸ್ ಐಟಿ ನ್ಯಾಯಾಲಯಕ್ಕೆ ತಿಳಿಸಿದ್ದು, ಮೂಲ ಚಾರ್ಜ್ ಶೀಟ್ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಎಸ್‌ಐಟಿ ಸಲ್ಲಿಕೆ ಆಧಾರದ ಮೇಲೆ ನ್ಯಾಯಾಲಯ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.

- Advertisement -

Latest News

error: Content is protected !!