Saturday, June 13, 2026
Homeಮನರಂಜನೆಬಾಲಿವುಡ್‌ ನಟ ಶಾರುಖ್ ಖಾನ್‌ ಆಸ್ಪತ್ರೆಗೆ ದಾಖಲು

ಬಾಲಿವುಡ್‌ ನಟ ಶಾರುಖ್ ಖಾನ್‌ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮುಂಬೈ; ಬಾಲಿವುಡ್‌ ನಟ ಶಾರುಖ್ ಖಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಲಾಘಾತದಿಂದ ನಟ ಶಾರುಕ್‌ ಖಾನ್‌ ಅಸ್ವಸ್ಥರಾಗಿದ್ದು ಅವರನ್ನು ಬುಧವಾರ ಅಹಮದಾಬಾದ್‌ನ ಕೆ ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮಂಗಳವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಐಪಿಎಲ್ ಪಂದ್ಯದ ವೇಳೆ ಬಿಸಿ ಗಾಳಿಯ ಪರಿಸ್ಥಿತಿಯಿಂದಾಗಿ ಶಾರುಕ್‌ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.


ಐಪಿಎಲ್‌ 2024ರ ಮೊದಲ ಪ್ಲೇಆಫ್ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಕೆಕೆಆರ್‌ ತಂಡವನ್ನು ಬೆಂಬಲಿಸಲು ಶಾರುಕ್‌ ಖಾನ್ ಅಹಮದಾಬಾದ್‌ಗೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!