Monday, June 8, 2026
Homeಕರಾವಳಿಪುತ್ತೂರು; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

- Advertisement -
- Advertisement -

ಪುತ್ತೂರು; ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಿತ್ತೂರಿನಲ್ಲಿ ನಡೆದಿದೆ. ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ.

ಕೆಲ ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ನಡೆದಿತ್ತು.ಅಪಘಾತದಲ್ಲಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ ಮಂಜುಶ್ರೀ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು,  ನಿನ್ನೆ ರಾತ್ರಿ ಚಿಕಿತ್ಸೆಗೆ ಮಂಜುಶ್ರೀ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!