Friday, June 5, 2026
Homeಕರಾವಳಿಮಂಗಳೂರು:ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಯುವಕ ಸಾವು

ಮಂಗಳೂರು:ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಯುವಕ ಸಾವು

- Advertisement -
- Advertisement -

ಮಂಗಳೂರು:ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಟಿಕಾನ ಸಮೀಪದ ಲೋಹಿತ್ ನಗರ ಕ್ರಾಸ್ ಬಳಿ ನಡೆದಿದೆ. ಗೌರವ್ ಎಚ್.(29) ಮೃತ ದುರ್ದೈವಿ.

ಗೌರವ್ ಕೂಳೂರಿನಿಂದ ಬೋಳಾರ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಹಿಂದಿನಿಂದ ಢಿಕ್ಕಿ ಹೊಡೆದಿದೆ.ಪರಿಣಾಮ ಗೌರವ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಟ್ಯಾಂಕರ್ ಅವರ ಮೇಲೆಯೇ ಹರಿದು ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ಗೌರವ್ ಅವರು ಕೂಳೂರಿನ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುವ ವೇಳೆ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಟ್ರಾಫಿಕ್ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!