Saturday, June 13, 2026
Homeಕರಾವಳಿಮಂಗಳೂರುಮಂಗಳೂರು ಮತ್ತು ಉಡುಪಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣಾ ಪ್ರಚಾರ

ಮಂಗಳೂರು ಮತ್ತು ಉಡುಪಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣಾ ಪ್ರಚಾರ

- Advertisement -
- Advertisement -

ಮಂಗಳೂರು: ವಿಧಾನ ಪರಿಷತ್ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಮಂಗಳೂರಿನಲ್ಲಿ ಎರಡು ಮತ್ತು ಉಡುಪಿಯಲ್ಲಿ ಒಂದು ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ವಿಜಯೇಂದ್ರ, ಮಂಗಳೂರಿನ ಶಕ್ತಿನಗರ ಮತ್ತು ಸುಧೀಂದ್ರ ಹಾಲ್ ನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಉಡುಪಿಯ ಕಿದಿಯೂರಿನಲ್ಲಿ ಮತಯಾಚನೆ ಮಾಡಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಪರ ವಿಜಯೇಂದ್ರ ಮತಯಾಚನೆ ಮಾಡಲಿದ್ದಾರೆ.

ನೈಋತ್ಯ ‌ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಎದುರಿಸುತ್ತಿದ್ದು, ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಸ್ಫರ್ಧೆ ಮಾಡಿದ್ದಾರೆ

- Advertisement -

Latest News

error: Content is protected !!