Friday, June 5, 2026
Homeಕರಾವಳಿಮಂಗಳೂರುಮಂಗಳೂರು: ರಸ್ತೆಯಲ್ಲಿ ನಮಾಜ್ ಪ್ರಕರಣ; ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ರಸ್ತೆಯಲ್ಲಿ ನಮಾಜ್ ಪ್ರಕರಣ; ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ಕದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸುಮೋಟೋ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಐಪಿಸಿ ಸೆಕ್ಷನ್ 341, 283, 143 ಮತ್ತು 149ರ ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದ್ದು, ಅಪರಿಚಿತ ವ್ಯಕ್ತಿಗಳ ಮೇಲೆ ಎಫ್ ಐಆರ್ ಮಾಡಲಾಗಿದೆ.

ಕಳೆದ ಶುಕ್ರವಾರ ಕಂಕನಾಡಿಯಲ್ಲಿ ಮಸೀದಿ ಮುಂಭಾಗದ ರಸ್ತೆಯಲ್ಲೇ ನಮಾಜ್ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.‌

ವಿಶ್ವ ಹಿಂದೂ ಪರಿಷತ್ ಕೂಡಾ ರಸ್ತೆಯಲ್ಲಿ ನಮಾಜ್ ಮಾಡುವುದನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಲ್ಲಿಸದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವ ಎಚ್ಚರಿಕೆಯನ್ನು ನೀಡಿತ್ತು.

- Advertisement -

Latest News

error: Content is protected !!