Thursday, June 4, 2026
Homeತಾಜಾ ಸುದ್ದಿಮನೆಯಿಂದ ಹಿರಿಯರು ಹೊರ ಹೋದ್ರೆ ಯಾವ ಗುಂಡಿಯಲ್ಲಿ ಬಿದ್ದು ಸಾಯ್ತಾರೆ ಎಂಬ ಭಯ; ರಾಜ್ಯ ಸರ್ಕಾರದ...

ಮನೆಯಿಂದ ಹಿರಿಯರು ಹೊರ ಹೋದ್ರೆ ಯಾವ ಗುಂಡಿಯಲ್ಲಿ ಬಿದ್ದು ಸಾಯ್ತಾರೆ ಎಂಬ ಭಯ; ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಟೀಕೆ

- Advertisement -
- Advertisement -

ಬೆಂಗಳೂರು: ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾ ಭಾಷಣ ಮಾಡಿದ ಡಿವಿಎಸ್, ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವಯಸ್ಕರು ಮನೆಯಿಂದ ಹೊರ ಹೋದ ಮೇಲೆ ಯಾವ ಗುಂಡಿಯಲ್ಲಿ ಬಿದ್ದು ಸಾಯುತ್ತಾರೋ ಭಯದಿಂದ ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲದಂತಾಗಿದೆ ಎಂದು ಹೇಳಿರುವ ಸದಾನಂದ ಗೌಡ,ನಿನ್ನೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ರಾಜ್ಯದ ಎಲ್ಲಾ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿರುವುದು ಗೊತ್ತಿದೆ ಎಂದ ಸದಾನಂದ ಗೌಡ, ಕಾಂಗ್ರೆಸ್ ಸರ್ಕಾರ ಸರಿದಾರಿಗೆ ಬರದೆ ಇದ್ದರೆ ಅದನ್ನು ಸರಿದಾರಿಗೆ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

- Advertisement -

Latest News

error: Content is protected !!