Friday, June 5, 2026
Homeಕರಾವಳಿಉಡುಪಿಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ನಾಲ್ವರು ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

ಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ನಾಲ್ವರು ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

- Advertisement -
- Advertisement -

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ರಘುಪತಿ ಭಟ್ ಅವರೊಂದಿಗೆ  ಗುರುತಿಸಿಕೊಂಡಿರುವ ನಾಲ್ವರು ಬಿಜೆಪಿ ಪದಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ಶಿಸ್ತು ಕ್ರಮದ ನೋಟಿಸ್ ನೀಡಿದೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಬಂಡಾಯ ಅಭ್ಯರ್ಥಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿ ಮಾಡಿದೆ.

ಪಕ್ಷದ ಪದಾಧಿಕಾರಿಗಳಾಗಿ ಜವಾಬ್ದಾರಿ ಹೊಂದಿದ್ದರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ಅಕ್ಷಮ್ಯವಾಗಿದೆ. ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಗಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!