Monday, June 15, 2026
Homeಚಿಕ್ಕಮಗಳೂರುಎಸ್‌ಐಟಿಯಿಂದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ..!

ಎಸ್‌ಐಟಿಯಿಂದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ..!

- Advertisement -
- Advertisement -

ಹಾಸನ: ಎಸ್‌ಐಟಿ ಅಧಿಕಾರಿಗಳು ಸಂಸದ ಪ್ರಜ್ವಲ್ ರೇವಣ್ಣ ಅವರ ಹಾಸನದ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಆರಂಭಿಸಿದ್ದ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಇಂದು ಮುಂಜಾನೆ ಪೂರ್ಣಗೊಂಡಿದ್ದು, ಈ ವೆಳೆಯಲ್ಲಿ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು, ಹೊದಿಕೆಯನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದುಕೊಂಡಿದೆ.

ಎಸ್‌ಐಟಿ ತಂಡ ಸತತ ಹತ್ತು ಗಂಟೆಗಳ ಕಾಲ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಪ್ರಜ್ವಲ್ ಮಹತ್ವದ ದಾಖಲೆ ಸಂಗ್ರಹಿಸಲು ಸಲುವಾಗಿ ಪರಿಶೀಲನೆ ನಡೆಸಿದೆ.ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ಎಸ್‌ಐಟಿ ವಶಕ್ಕೆ ಪಡೆದಿದ್ದು, ಆ ವಸ್ತುಗಳನ್ನು ಬೆಂಗಳೂರಿಗೆ ತನಿಖೆಗಾಗಿ ತರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಾಸ್ಸಾಗುವ ಕುರಿತು ಎಸ್‌ಐಟಿ ಮುಂದೆ ಹಾಜರಾಗುವ ಬಗ್ಗೆ ವಿದೇಶದಿಂದಲೇ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.

- Advertisement -

Latest News

error: Content is protected !!