Thursday, June 4, 2026
Homeತಾಜಾ ಸುದ್ದಿಬೆಂಗಳೂರು: ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ ಎಸ್ ಐಟಿ ಅಧಿಕಾರಿಗಳು

ಬೆಂಗಳೂರು: ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ ಎಸ್ ಐಟಿ ಅಧಿಕಾರಿಗಳು

- Advertisement -
- Advertisement -

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರು ಕೊನೆಗೂ ನಿನ್ನೆ ರಾತ್ರಿ 1 ಗಂಟೆ ವೇಳೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು. ಅವರು ಆಗಮಿಸುತ್ತಿದ್ದಂತೆ ಎಸ್ ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ಮೊದಲು ಸಿಐಎಫ್ ಎಸ್  ಪಡೆ ಪ್ರಜ್ವಲ್  ಅವರನ್ನು ತಮ್ಮ ವಶಕ್ಕೆ ತೆಗೆದು ಕೊಂಡು ಬಳಿಕ ಅವರನ್ನು ಇಮಿಗ್ರೇಷನ್ ಅಧಿಕಾರಿಗಳ ಬಳಿ ಕರೆದು ಕೊಂಡು ಹೋದರು,. ಈ ವೇಳೆ ಕಾನೂನು ಪ್ರಕ್ರಿಯೆ ಮುಗಿದ ಕೂಡಲೇ ಎಸ್ ಐ ಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಳಿಕ ಪ್ರಜ್ವಲ್ ರನ್ನು ಎಸ್ ಐ ಟಿ ವಶಕ್ಕೆ ಪಡೆದುಕೊಂಡು ಸಿಐಡಿ ಕಚೇರಿಯತ್ತ ಕರೆದುಕೊಂಡು ಹೋದ್ರು. ಅವರನ್ನು ಶನಿವಾರ ಸಂಜೆ ನ್ಯಾಯಾಧೀಶರ (ಇಂದು) ಮುಂದೆ ಹಾಜರು ಪಡಿಸಿ ಅವರನ್ನು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೇ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಅವರನ್ನು ಬೌರಿಂಗ್ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲಿದ್ದಾರೆ ಎನ್ನಲಾಗಿದೆ.

ಈ ನಡುವೆ ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಅಂದರೆ ಶನಿವಾರ ಅದರ ಅರ್ಜಿ ವಿಚಾರಣೆ ನಡೆಯಲಿದೆ.

- Advertisement -

Latest News

error: Content is protected !!