Saturday, June 6, 2026
Homeತಾಜಾ ಸುದ್ದಿಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ನಾಗೇಂದ್ರ ರಾಜೀನಾಮೆ

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ನಾಗೇಂದ್ರ ರಾಜೀನಾಮೆ

- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣಕ್ಕ ಸಂಬಂಧಪಟ್ಟಂತೆ  ಸಚಿವ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೇ ನೀಡಿದ್ದಾರೆ. ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ವರ್ಗಾವಣೆ ಪ್ರಕರಣದ ತನಿಖೆ ಸಂಬಂಧ ಬ್ಯಾಂಕ್‌ ಆಫ್‌ ಇಂಡಿಯಾದ ಮೂವರು ಉದ್ಯೋಗಿಗಳು ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಇನ್ನೊಂದೆಡೆ ಕ್ಷಿಪ್ರ ತನಿಖೆ ಮುಂದುವರಿಸಿರುವ ಎಸ್‌ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಆಪ್ತರು ಎನ್ನಲಾದ ನಾಗರಾಜು ನೆಕ್ಕಂಟಿ ಹಾಗೂ ನಾಗೇಶ್ವರ್‌ ರಾವ್‌ ಎಂಬುವವರನ್ನು ಬಂಧಿಸಿದೆ.

- Advertisement -

Latest News

error: Content is protected !!