ಹೈದರಾಬಾದ್: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ (87)ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮಾಧ್ಯಮ ಕ್ಷೇತ್ರದ ದಿಗ್ಗಜ ಎಂದೇ ಖ್ಯಾತಿ ಗಳಿಸಿದ್ದ ಅವರು ಮಾಧ್ಯಮ ಕ್ಷೇತ್ರಕ್ಕೆ ಹೊಸ ಭಾಷ್ಯ ಬರೆದಿದ್ದರು.
ಹೈದರಾಬಾದ್ ನಲ್ಲಿ ಅತಿ ದೊಡ್ಡ ಫಿಲ್ಮ್ ಸಿಟಿ ರಾಮೋಜಿ ರಾವ್ ಫಿಲ್ಮ್ ಸಿಟಿ ನಿರ್ಮಿಸಿದ್ದ ಅವರು ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ರಾಮೋಜಿ ಫಿಲ್ಮ್ ಸಿಟಿಯಲ್ಲಿ ‘ಬಾಹುಬಲಿ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳ ಶೂಟಿಂಗ್ ಆಗಿದೆ. 1996ರಲ್ಲಿ ಇದನ್ನು ರಾಮೋಜಿ ರಾವ್ ಸ್ಥಾಪಿಸಿದರು. ಹೈದರಾಬಾದ್ನಲ್ಲಿರುವ ಈ ಪ್ರದೇಶ 1,666 ಎಕರೆ ಪ್ರದೇಶದಲ್ಲಿ ಇದೆ. ವಿಶ್ವದಲ್ಲೇ ಇದು ಅತಿ ದೊಡ್ಡ ಸ್ಟುಡಿಯೋ ಎನ್ನುವ ಖ್ಯಾತಿ ಇದೆ. ಇದು ವಿಶ್ವ ದಾಖಲೆ ಪಟ್ಟಿಯಲ್ಲೂ ಇದೆ. ರಾಮೋಜಿ ರಾವ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


