- Advertisement -
![]()
- Advertisement -
ಮಂಗಳೂರು: ಜೂ. 8ರಿಂದ 11ರ ವರೆಗೆ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಜೂ. 2ರಂದು ಮುಂಗಾರು ಆಗಮಿಸಿತ್ತಾದರೂ ಬಳಿಕದ ದಿನಗಳಲ್ಲಿ ಭಾರೀ ಮಳೆ ಸುರಿಯಲಿಲ್ಲ. ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ದ.ಕ. ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಶುಕ್ರವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಮಧ್ಯಾಹ್ನವರೆಗೆ ಮಳೆ ಮುಂದುವರೆದಿತ್ತು. ಬಳಿಕ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸುಳ್ಯದಲ್ಲಿ ಮಧ್ಯಾಹ್ನ ಬಳಿಕ ಧಾರಾಕಾರ ಮಳೆ ಸುರಿದಿದೆ. ಉಳ್ಳಾಲ, ಬಂಟ್ವಾಳ, ಸುಬ್ರಹ್ಮಣ್ಯ, ಬೆಳ್ತಂಗಡಿಯಲ್ಲಿ ಸಾಧಾರಣ ಮಳೆಯಾಗಿದೆ.
- Advertisement -


