Monday, June 8, 2026
Homeತಾಜಾ ಸುದ್ದಿಇನ್ಮೇಲೆ ನಾನು ಸಿನಿಮಾ ಮಾಡಲ್ಲ, ನಾನಿನ್ನು ಫುಲ್ ಟೈಂ ರಾಜಕಾರಣಿ; ನಿಖಿಲ್ ಕುಮಾರಸ್ವಾಮಿ ಘೋಷಣೆ

ಇನ್ಮೇಲೆ ನಾನು ಸಿನಿಮಾ ಮಾಡಲ್ಲ, ನಾನಿನ್ನು ಫುಲ್ ಟೈಂ ರಾಜಕಾರಣಿ; ನಿಖಿಲ್ ಕುಮಾರಸ್ವಾಮಿ ಘೋಷಣೆ

- Advertisement -
- Advertisement -

ಮಂಡ್ಯ: ಇನ್ಮೇಲೆ ನಾನು ಸಿನಿಮಾ ಮಾಡಲ್ಲ, ನಾನಿನ್ನು ಫುಲ್ ಟೈಂ ರಾಜಕಾರಣಿ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ನಾನು ಪೂರ್ಣ ಸಮಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದೇನೆ.ಹಾಗಾಗಿ, ನನಗೆ ರಾಜಕೀಯದಲ್ಲಿ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಸ್ವಲ್ಪ ಸಮಯದವರೆಗೆ ಚಿತ್ರರಂಗದಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿ ಪ್ರತಿನಿಧಿಸುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್, ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಾಯಕರು ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಇನ್ನು, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಿಖಿಲ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

- Advertisement -

Latest News

error: Content is protected !!