Friday, June 5, 2026
Homeಕರಾವಳಿಉಡುಪಿನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಆಹ್ವಾನ

ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಆಹ್ವಾನ

- Advertisement -
- Advertisement -

ಉಡುಪಿ: ಇಂದು ಸಂಜೆ  ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿಯ ರೈಸಿನಾ ಹಿಲ್ಸ್ ನಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಆಹ್ವಾನ ನೀಡಲಾಗಿದೆ.

ಪ್ರಧಾನಿ ಕಾರ್ಯಾಲಯದಿಂದ ತಡರಾತ್ರಿ ಆಮಂತ್ರಣ ತಲುಪಿದೆ ಎನ್ನಲಾಗಿದೆ.ಹೀಗಾಗಿ ಬೆಂಗಳೂರಿನಲ್ಲಿದ್ದ ಪೇಜಾವರ ಶ್ರೀ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಪೇಜಾವರ ಶ್ರೀ ವಿಶ್ವೇಶತೀರ್ಥರಿಗೆ ಮರಣೋತ್ತರ ಪದ್ಮವಿಭೂಷಣ ನೀಡಲಾಗಿತ್ತು.ಈ ಹಿನ್ನೆಲೆ ಪೇಜಾವರ ಶ್ರೀಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

- Advertisement -

Latest News

error: Content is protected !!