Wednesday, June 3, 2026
Homeಕರಾವಳಿಮಂಗಳೂರುಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ; ದ.ಕ. ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ; ದ.ಕ. ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಸಂಭ್ರಮ

- Advertisement -
- Advertisement -

ಮಂಗಳೂರು: ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ‌ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು.

ಮಂಗಳೂರಿನ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಟಾಕಿ‌ ಸಿಡಿಸಿ, ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.ಅಲ್ಲದೇ ಬಿಜೆಪಿ ಕಚೇರಿಯ ಮುಂಭಾಗ ಪ್ರಮಾಣ ವಚನ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಎಲ್ಇಡಿ ಪರದೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಮುಖಂಡರು ಭಾಗಿಯಾಗಿದ್ದರು.

ಇದೇ ವೇಳೆ ಸುಳ್ಯ, ಬೆಳ್ಳಾರೆ, ಜಾಲ್ಸೂರು, ಕಡಬ ಸೇರಿದಂತೆ ವಿವಿಧ ಕಡೆಗಳಲ್ಲಿಯೂ ಸಂಭ್ರಮಾಚರಣೆ ನಡೆದಿದೆ.

- Advertisement -

Latest News

error: Content is protected !!