Friday, June 5, 2026
Homeಕರಾವಳಿಮಂಗಳೂರುಬಂಟ್ವಾಳ:ಬೋಳಿಯಾರಿನಲ್ಲಿ ಚೂರಿ ಇರಿತ ಪ್ರಕರಣ; ಪೊಲೀಸರಿಂದ ಮೂವರು ಅರೆಸ್ಟ್

ಬಂಟ್ವಾಳ:ಬೋಳಿಯಾರಿನಲ್ಲಿ ಚೂರಿ ಇರಿತ ಪ್ರಕರಣ; ಪೊಲೀಸರಿಂದ ಮೂವರು ಅರೆಸ್ಟ್

- Advertisement -
- Advertisement -

ಬಂಟ್ವಾಳ: ಬೋಳಿಯಾರಿನಲ್ಲಿ ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವದ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಣಾಜೆ ಪೋಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದು, ಇನ್ನೂ ಕೆಲವರ ಪತ್ತೆಗಾಗಿ ಶೋಧ ನಡೆಸಿದ್ದಾರೆ.

ಬೊಳಿಯಾರಿನಲ್ಲಿ ಬಾರ್‌ನ ಮುಂಭಾಗದಲ್ಲಿ ಚಾಕು ಇರಿತದ ಘಟನೆ ನಡೆದಿದ್ದು, ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದಲ್ಲಿ 20ಕ್ಕೂ ಹೆಚ್ಚು ಮುಸ್ಲಿಂ ಯುವಕರ ತಂಡ ಬೈಕ್ ಗಳಲ್ಲಿ ಹಿಂಬಾಲಿಸಿಕೊಂಡು ಬಂದು ವಾಗ್ವಾದ ನಡೆಸಿ ಇರಿದಿದ್ದಾರೆ ಎಂದು ಹೇಳಲಾಗಿದೆ.

ಹರೀಶ್ (41) ಹಾಗೂ ನಂದಕುಮಾರ್ (24) ಎಂಬ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಇರಿಯಲಾಗಿದ್ದು, ಕೃಷ್ಣ ಕುಮಾರ್ ಎಂಬಾತನಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ

- Advertisement -

Latest News

error: Content is protected !!