Friday, June 5, 2026
Homeತಾಜಾ ಸುದ್ದಿಮೈಸೂರಿನಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯ ಬರ್ಬರ ಹತ್ಯೆ

ಮೈಸೂರಿನಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯ ಬರ್ಬರ ಹತ್ಯೆ

- Advertisement -
- Advertisement -

ಮೈಸೂರು: ಮಾರಾಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಸಿದ್ಧಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿ ನಡೆದಿದೆ. ಮೈಸೂರಿನ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ(90) ಮೃತ ಸ್ವಾಮೀಜಿ.

ರವಿ ಎಂಬಾತ ಸ್ವಾಮೀಜಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ವಾಮೀಜಿಯ ಬಳಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದನಂತೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!