Friday, August 28, 2026
Homeತಾಜಾ ಸುದ್ದಿಬೆಳ್ಳಂಬೆಳಗ್ಗೆ ಡಿ ಬಾಸ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ; ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಬೆಳ್ಳಂಬೆಳಗ್ಗೆ ಡಿ ಬಾಸ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ; ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

- Advertisement -
- Advertisement -

ಮೈಸೂರು; ಬೆಳ್ಳಂಬೆಳಗ್ಗೆ ನಟ ದರ್ಶನ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯುಂ ಹೊರ ಬಿದ್ದಿದೆ. ನಟ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಮೈಸೂರಿನ ಅವರ ಫಾರ್ಮ್ ಹೌಸ್ ನಿಂದಲೇ ಅರೆಸ್ಟ್ ಮಾಡಲಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ದರ್ಶನ್ ಸೇರಿ ಒಟ್ಟು 10 ಜನರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಮಾಡಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಫೋಟೋ ಕಳುಹಿಸಿ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಮೈಸೂರಿನಿಂದ ದರ್ಶನ್ ಅವರನ್ನು ಬೆಂಗಳೂರಿಗೆ ಕರೆ ತರಲಾಗುತ್ತಿದೆ.

- Advertisement -

Latest News

error: Content is protected !!