Friday, June 5, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ಸಂಸದ ಬ್ರಿಜೇಶ್ ಚೌಟ ಟೆಂಪಲ್ ರನ್

ಮಂಗಳೂರಿನಲ್ಲಿ ಸಂಸದ ಬ್ರಿಜೇಶ್ ಚೌಟ ಟೆಂಪಲ್ ರನ್

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸರಣಿ ದೇವಸ್ಥಾನಗಳ ಭೇಟಿ ನಡೆಸಿದ್ದಾರೆ.

ನವದೆಹಲಿಯಲ್ಲಿಬಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬ್ರಿಜೇಶ್ ಚೌಟ, ಮಂಗಳೂರಿಗೆ ವಾಪಸಾದ ಕೂಡಲೇ ಮಂಗಳೂರಿನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಮಂಗಳಾದೇವಿ ದೇವಸ್ಥಾನ, ಉರ್ವ ಮಹಾಗಣಪತಿ ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ, ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಶರವು ಮಹಾಗಣಪತಿ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ ಮತ್ತು ಮರೋಳಿ ಸೂರ್ಯನಾರಾಯಣ ದೇವಸ್ಥಾನಗಳಿಗೆ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು‌.

ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ನಿನ್ನೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡಾ ಮಂಗಳೂರಿನಲ್ಲಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು

- Advertisement -

Latest News

error: Content is protected !!