Wednesday, July 22, 2026
Homeತಾಜಾ ಸುದ್ದಿನನ್ನ ಮೇಲೂ ನಟ ದರ್ಶನ್ ಹಲ್ಲೆ ಮಾಡಿದ್ದಾರೆ; ವಿಚಾರಣೆ ವೇಳೆ ಬಾಯ್ಬಿಟ್ಟ ಪವಿತ್ರ ಗೌಡ

ನನ್ನ ಮೇಲೂ ನಟ ದರ್ಶನ್ ಹಲ್ಲೆ ಮಾಡಿದ್ದಾರೆ; ವಿಚಾರಣೆ ವೇಳೆ ಬಾಯ್ಬಿಟ್ಟ ಪವಿತ್ರ ಗೌಡ

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 13 ಜನ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅದರಲ್ಲಿ ದರ್ಶನ್ ಅವರ ಗೆಳತ ಪವಿತ್ರಾ ಗೌಡ ಕೂಡ ಒಬ್ಬರು.

ಈಗಾಗಲೇ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪವಿತ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಪವಿತ್ರ ಕೆಲವು ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ.ದರ್ಶನ್ ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದೆಲ್ಲ ಆಗಿದ್ದು ನಿನ್ನಿಂದಲೇ ಅಂತ ಸಿಟ್ಟಿಗೆದ್ದು ನನ್ನ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ. ಇನ್ನು ಹಲ್ಲೆಗೊಳಗಾದ ಪವಿತ್ರ ಆಸ್ಪತ್ರೆಗೆ ದಾಖಲಾಗಿದ್ರು.ನಿನ್ನೆಯಷ್ಟೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿದ್ದಾರೆ ಅನ್ನೋದು ಗೊತ್ತಾಗಿದೆ. ದರ್ಶನ್‌ ಬಾಯಿಗೆ ಬಂದಂತೆ ಬೈದು ನನ್ನ ಮೇಲೆ ಹಲ್ಲೆ ಮಾಡಿದ್ರು ಎಂದು ಪೊಲೀಸರ ಮುಂದೆ ಪವಿತ್ರಾ ಬಾಯ್ಬಿಟ್ಟಿದ್ದಾರೆ.

- Advertisement -

Latest News

error: Content is protected !!