Saturday, June 13, 2026
Homeಕರಾವಳಿಮಂಗಳೂರುಬೋಳಿಯಾರು ಚೂರಿ ಇರಿತ ಪ್ರಕರಣ 6 ಮಂದಿ ಅರೆಸ್ಟ್; ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹೇಳಿಕೆ

ಬೋಳಿಯಾರು ಚೂರಿ ಇರಿತ ಪ್ರಕರಣ 6 ಮಂದಿ ಅರೆಸ್ಟ್; ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹೇಳಿಕೆ

- Advertisement -
- Advertisement -

ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಅಗರವಾಲ್,
ಸಿಸಿಟಿವಿ ವೀಡಿಯೋ ಆಧಾರದಲ್ಲಿ ಒಟ್ಟು 20 ಜನರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಅರೋಪಿಗಳ ಬಂಧನ ಪ್ರಕ್ರಿಯೆ ನಡೆಯುತ್ತಿದ್ದು, ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ ಎಂದು ತಿಳಿಸಿರುವ ಅನುಪಮ್ ಅಗರವಾಲ್, ಮೆರವಣಿಗೆ ಮುಗಿದ ನಂತರ ಮೂವರು ಬಿಜೆಪಿ ಕಾರ್ಯಕರ್ತರು ಮಸೀದಿ ಮುಂದೆ ಘೋಷಣೆ ಕೂಗಿದ್ದು ನಂತರ ಅವರಿಗೆ ಹಲ್ಲೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳಲ್ಲಿ ಒಬ್ಬಾತ ರೌಡಿ ಶೀಟರ್ ಆಗಿದ್ದು ಆತ ಚೂರಿ ಇರಿಸಿಕೊಂಡಿದ್ದನು ಎಂದು ಪೊಲೀಸ್ ಆಯುಕ್ತ ಅಗರವಾಲ್ ಹೇಳಿದ್ದು, ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಗೂ ಮೊದಲು ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದರು ಎಂದು ತಿಳಿಸಿದ್ದಾರೆ.

ಇದೇ ವೇಳೆ, ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದೇವೆ ಎಂದು ತಿಳಿಸಿರುವ ಅನುಪಮ್ ಅಗರವಾಲ್, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಎಲ್ಲಾ ಧರ್ಮಗಳ ಪ್ರಮುಖರನ್ನು ಕರೆದು ಶಾಂತಿ ಸಭೆ ನಡೆಸುವುದಾಗಿಯೂ ಹೇಳಿದ್ದಾರೆ

- Advertisement -

Latest News

error: Content is protected !!