Saturday, June 6, 2026
Homeಕರಾವಳಿಮಂಗಳೂರುತಲವಾರು ದಾಳಿಗೊಳಗಾಗಿದ್ದ ಬೆಳ್ತಂಗಡಿಯ ಬಿಜೆಪಿ ಮುಖಂಡ ರಾಜೇಶ್ ಆರೋಗ್ಯ ವಿಚಾರಿಸಿದ ಆರ್. ಅಶೋಕ್ ಮತ್ತು ನಳೀನ್ ಕುಮಾರ್ ಕಟೀಲ್

ತಲವಾರು ದಾಳಿಗೊಳಗಾಗಿದ್ದ ಬೆಳ್ತಂಗಡಿಯ ಬಿಜೆಪಿ ಮುಖಂಡ ರಾಜೇಶ್ ಆರೋಗ್ಯ ವಿಚಾರಿಸಿದ ಆರ್. ಅಶೋಕ್ ಮತ್ತು ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಮಂಗಳೂರು: ತಲವಾರು ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಬಿಜೆಪಿ ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ. ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ಮಾಡಿದರು.

ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಆರ್. ಅಶೋಕ್ ಮತ್ತು ನಳೀನ್ ಕುಮಾರ್ ಕಟೀಲ್, ಚಿಕಿತ್ಸೆ ಪಡೆಯುತ್ತಿರುವ ರಾಜೇಶ್ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ವಿಪಕ್ಷ ನಾಯಕ ಅಶೋಕ್ ಜೊತೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಕೂಡಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವಿಚಾರವಾಗಿ ಗಲಾಟೆ ನಡೆದು ಕಾಂಗ್ರೆಸ್ ಮಾಜಿ ಗ್ರಾಮ ಪಂಚಾಯತ್ ಸದಸ್ಯ ತಲವಾರಿನಿಂದ ರಾಜೇಶ್ ಮೇಲೆ ಹಲ್ಲೆ ಮಾಡಿದ್ದರು.

ಹಲ್ಲೆಗೊಳಗಾಗಿದ್ದ ರಾಜೇಶ್ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.‌ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ

- Advertisement -

Latest News

error: Content is protected !!