Friday, June 5, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ

- Advertisement -
- Advertisement -

ಚಾರ್ಮಾಡಿ; ಕಾಡಾನೆಯೊಂದು ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ನಡೆದಿದೆ. ಸರ್ಕಾರಿ ಬಸ್ಸಿನ ಪಕ್ಕದಲ್ಲೇ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ.

ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿದೆ. ಇನ್ನು ಆನೆಯನ್ನ ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದಾರೆ. ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅರ್ಧ ಗಂಟೆ ಬಳಿಕ ಅರಣ್ಯಕ್ಕೆ ಇಳಿದಿದೆ ಒಂಟಿ ಸಲಗ.ಕಳೆದ ಎರಡು ತಿಂಗಳಿಂದಲೂ ಒಂಟಿ ಸಲಗ ಚಾರ್ಮಾಡಿಯಲ್ಲೇ ಇದೆ. ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಈ ಕಾಡಾನೆ ಬಂದಿತ್ತು. ಕಾಡಾನೆಯನ್ನ ಸ್ಥಳಾಂತರಿಸುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!