Saturday, June 13, 2026
Homeತಾಜಾ ಸುದ್ದಿಜಾಮೀನು ಮಂಜೂರಾದ ಬೆನ್ನಲ್ಲೇ ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಬಿಎಸ್ವೈ

ಜಾಮೀನು ಮಂಜೂರಾದ ಬೆನ್ನಲ್ಲೇ ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಬಿಎಸ್ವೈ

- Advertisement -
- Advertisement -

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನಿನ್ನೆ ಕೋರ್ಟ್ ನಿನ್ನೆ ನಿರೀಕ್ಷಣಾ ಜಾಮೀನು ದೊರೆತಿದೆ. ಬಂಧನ ಭೀತಿಯಿಂದಾಗಿ ಎರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದ ಬಿ ಎಸ್ ವೈ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಬಿಗ್ ರಿಲೀಫ್‌ ಸಿಕ್ಕಂತಾಗಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸಿಐಡಿಗೆ ಹೈಕೋರ್ಟ್‌ ಸೂಚಿಸಿದೆ.ಇನ್ನು ಸಿಐಡಿ ನೋಟಿಸ್ ಜಾರಿ ಮಾಡುತ್ತಿದ್ದಂತೆ ನಾನು ಜೂನ್ 17 ರಂದು ವಿಚಾರಣೆಗೆ ಹಾಜರಾಗೋದಾಗಿ ಬಿಎಸ್ವೈ ಹೇಳಿದ್ದರು.

- Advertisement -

Latest News

error: Content is protected !!