Saturday, June 13, 2026
Homeತಾಜಾ ಸುದ್ದಿಲೋಕಸಭೆ ಮತ್ತು ಪರಿಷತ್ ನಲ್ಲಿ ಗೆದ್ದ ಅಭ್ಯರ್ಥಿಗಳಿಗೆ ದ.ಕ. ಜಿಲ್ಲಾ ಬಿಜೆಪಿಯಿಂದ ಇಂದು ಮಂಗಳೂರಿನಲ್ಲಿ ಅಭಿನಂದನೆ

ಲೋಕಸಭೆ ಮತ್ತು ಪರಿಷತ್ ನಲ್ಲಿ ಗೆದ್ದ ಅಭ್ಯರ್ಥಿಗಳಿಗೆ ದ.ಕ. ಜಿಲ್ಲಾ ಬಿಜೆಪಿಯಿಂದ ಇಂದು ಮಂಗಳೂರಿನಲ್ಲಿ ಅಭಿನಂದನೆ

- Advertisement -
- Advertisement -

ಮಂಗಳೂರು: ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಜಯ ಸಾಧಿಸಿದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳಿಗೆ ಇಂದು ಅಭಿನಂದನಾ ಸಮಾರಂಭ ಮಂಗಳೂರಿನಲ್ಲಿ ನಡೆಯಲಿದೆ.

ದಕ್ಷಿಣ ಕ‌ನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಸಂಜೆ 4.30ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂ ಗೆಲುವು ಸಾಧಿಸಿರುವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ನ ನೈಋತ್ಯ ಪದವೀಧರ ಕ್ಷೇತ್ರದಿಂದ ಗೆದ್ದಿರುವ ಡಾ. ಧನಂಜಯ ಸರ್ಜಿ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜಯ ಗಳಿಸಿರುವ ಎಸ್.ಎಲ್. ಭೋಜೇಗೌಡ ಅವರಿಗೆ ಅಭಿನಂದನೆ ನಡೆಯಲಿದೆ.

ಅಭಿನಂದನಾ ಕಾರ್ಯಕ್ರಮಕ್ಕೂ ಮುನ್ನ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಬಿಜೆಪಿ ಕಾರ್ಯಕರ್ತರಿಂದ ವಾಹನಾ ಜಾಥಾ ನಡೆಯಲಿದೆ.

- Advertisement -

Latest News

error: Content is protected !!