Saturday, June 6, 2026
Homeಅಪರಾಧವಿದ್ಯಾರ್ಥಿಗಳಿಗೆ ನೀಡಲಾದ ಆಹಾರದಲ್ಲಿ ಸತ್ತ ಹಾವು!; 11 ಮಂದಿ ಆಸ್ಪತ್ರೆಗೆ ದಾಖಲು

ವಿದ್ಯಾರ್ಥಿಗಳಿಗೆ ನೀಡಲಾದ ಆಹಾರದಲ್ಲಿ ಸತ್ತ ಹಾವು!; 11 ಮಂದಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬಿಹಾರ: ಇಲ್ಲಿನ ಬಂಕಾದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾದ ಆಹಾರದಲ್ಲಿ ಸತ್ತ ಹಾವೊಂದು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಆಹಾರ ಸ್ವೀಕರಿಸಿದ ಸುಮಾರು ಹತ್ತಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಜೂನ್ 13 ರಂದು ಬಿಹಾರದ ಬಂಕಾದಲ್ಲಿರುವ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳಿಗೆ ಇಲ್ಲಿನ ಖಾಸಗಿ ಮೆಸ್ ನಿಂದ ಆಹಾರ ಸರಬರಾಜು ಆಗಿದ್ದು, ಇದನ್ನು ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಕೆಲವರು ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಈ ವೇಳೆ ಮೆಸ್ ನಿಂದ ನೀಡಿದ ಆಹಾರದಲ್ಲಿ ಸತ್ತ ಹಾವಿನ ಮರಿ ಇರುವುದು ಬೆಳಕಿಗೆ ಬಂದಿದೆ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಹಾಸ್ಟೆಲ್ ಗೆ ವಾಪಸಾಗಿದ್ದಾರೆ ಎನ್ನಲಾಗಿದೆ. ಈ ಕಾಲೇಜಿನಲ್ಲಿ ಇದೆ ರೀತಿಯ ಪ್ರಕರಣ ಈ ಮೊದಲು ನಡೆದಿತ್ತು ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಹಿರಿಯ ಅಧಿಕಾರಿ ಅಂಶುಲ್ ಕುಮಾರ್ ಕೆಲ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ತಪ್ಪೆಸಗಿದ ಮೆಸ್ ಮಾಲೀಕರಿಗೆ ದಂಡ ವಿಧಿಸಲಾಗಿದೆ.

- Advertisement -

Latest News

error: Content is protected !!