Friday, June 5, 2026
Homeಕರಾವಳಿಉಡುಪಿಉಡುಪಿ: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಉಡುಪಿ: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿರುವ ಬಿಜೆಪಿ ಕಛೇರಿ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು
ಖಾಲಿ ಚೆಂಬು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

- Advertisement -

Latest News

error: Content is protected !!