Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಿಯಲ್ಲಿ ಮಕ್ಕಳಿಗೆ ಉಚಿತ ಲೇಖನಾ ಸಾಮಾಗ್ರಿ, ಕೊಡೆ, ಬ್ಯಾಗ್...

ಬೆಳ್ತಂಗಡಿ; ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಿಯಲ್ಲಿ ಮಕ್ಕಳಿಗೆ ಉಚಿತ ಲೇಖನಾ ಸಾಮಾಗ್ರಿ, ಕೊಡೆ, ಬ್ಯಾಗ್ ವಿತರಣೆ

- Advertisement -
- Advertisement -

ಬೆಳ್ತಂಗಡಿ; ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಿಯಲ್ಲಿ ಮಕ್ಕಳಿಗೆ ಉಚಿತ ಲೇಖನಾ ಸಾಮಾಗ್ರಿ, ಕೊಡೆ, ಬ್ಯಾಗ್ ವಿತರಣಾ ಕಾರ್ಯಕ್ರಮ ದಿನಾಂಕ 18-06- 2024ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಗ್ನೆಸ್ ಡಿಸೋಜಾ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರವೀಣ್ ಕುಮಾರ್, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಮುಕೇಶ್ ಮತ್ತು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸುಮಲತಾ ಇವರು ಉಪಸ್ಥಿತರಿದ್ದರು

ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಇವರು ಕೊಡ ಮಾಡಿದ ಲೇಖನಾ ಸಾಮಗ್ರಿ,  ಶ್ರೀಮತಿ ಆಗ್ನೆಸ್ ಡಿಸೋಜಾ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೇಬಿ ಇವರು ಕೊಡ ಮಾಡಿದ ಶಾಲಾ ಬ್ಯಾಗ್, ಶ್ರೀ ಲಕ್ಷ್ಮಣ ಪೂಜಾರಿ ಇವರು ಕೊಟ್ಟ ಕೊಡೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಪ್ರವೀಣ್ ಕುಮಾರ್ ಇವರು ಮಾತನಾಡಿ ವಿದ್ಯಾರ್ಥಿಗಳು ಸರಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ರೀತಿಯಲ್ಲಿ ವ್ಯಾಸಂಗ ನಡೆಸಬೇಕು ಎಂದು ಕರೆ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಗ್ನೆಸ್ ಡಿಸೋಜಾ ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು ಮತ್ತು ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೇಬಿ ಸ್ವಾಗತಿಸಿ ಸಹ ಶಿಕ್ಷಕ ಗಣರಾಜ್.ಎಸ್. ವಂದನಾರ್ಪಣೆಗೈದರು

- Advertisement -

Latest News

error: Content is protected !!