Wednesday, June 3, 2026
Homeಮನರಂಜನೆನಟ ದರ್ಶನ್ ಸರ್ ನನಗೆ ಗುರು ಸಮಾನರು, ಅವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದ್ರೆ ನಂಬಲಾಗಲ್ಲ;...

ನಟ ದರ್ಶನ್ ಸರ್ ನನಗೆ ಗುರು ಸಮಾನರು, ಅವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದ್ರೆ ನಂಬಲಾಗಲ್ಲ; ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಡಿಂಪಲ್ ಕ್ವೀನ್ ಪ್ರತಿಕ್ರಿಯೆ

- Advertisement -
- Advertisement -

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಸನ್ ಸೇರಿದಂತೆ ಒಟ್ಟು 17 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವು ಸ್ಯಾಂಡಲ್ ವುಡ್ ಸ್ಟಾರ್ ಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಘಟನೆ ಕುರಿತು ಡಿಂಪಲ್ ಕ್ಲೀನ್ ರಚಿತಾ ರಾಮ್ ಇನ್ಸ್ಟಾಗ್ರಾಂ ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ.

ಅವರ ಪೋಸ್ಟ್ ಹೀಗಿದೆ..

ನಮಸ್ಕಾರ..ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ.

ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..!

ಮೊದಲನೇಯಾದಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ. ಹೀಗಂಥಾ ಇನ್ಸ್ಟಾಗ್ರಾಂ ನಲ್ಲಿ ಅವರು ಬರೆದುಕೊಂಡಿದ್ದಾರೆ.

ಇನ್ನು ಈಗಾಗಲೇ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಉಪೇಂದ್ರ, ಕಿಚ್ಚ ಸುದೀಪ್, ರಮ್ಯಾ, ಉಮಾಶ್ರೀ ಸೇರಿದಂತೆ ಹಲವರು ರಿಯಾಕ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!