Wednesday, June 3, 2026
Homeಕರಾವಳಿಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಸದ ಬ್ರಿಜೇಶ್ ಚೌಟ ವಿಶೇಷ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಸದ ಬ್ರಿಜೇಶ್ ಚೌಟ ವಿಶೇಷ ಪ್ರಾರ್ಥನೆ

- Advertisement -
- Advertisement -

ಪುತ್ತೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬ್ರಿಜೇಶ್ ಚೌಟ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಪುತ್ತೂರಿನ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಂಸದರ ಜೊತೆಗಿದ್ದರು.‌ಇನ್ನು ನಿನ್ನೆ ಮಂಗಳೂರಿನ ಕಾವೂರಿನಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದ ಬ್ರಿಜೇಶ್ ಚೌಟ ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಈ ವೇಳೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!