- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಸಭೆ ಬುಧವಾರ ಕದ್ರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಮಹಿಳಾ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಕಾಂಗ್ರೆಸ್ ನ ಸಂಘಟನೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ಚರ್ಚೆ ನಡೆಯಿತು.ಸಭೆಯಲ್ಲಿ ಹಾಜರಿದ್ದ ಬ್ಲಾಕ್ ಅಧ್ಯಕ್ಷರುಗಳು ತಮ್ಮ ತಮ್ಮ ಬ್ಲಾಕ್ ನ ಕೆಲಸ ಕಾರ್ಯಗಳ ವರದಿಯನ್ನು ಮಂಡಿಸಿದರು.
ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳನ್ನು ಹಾಗೂ ಬ್ಲಾಕ್ ಅಧ್ಯಕ್ಷರುಗಳನ್ನು ಅಭಿನಂದಿಸಲಾಯಿತು.
- Advertisement -