Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಸಂಸದರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನೆ

ಮಂಗಳೂರು: ಸಂಸದರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನೆ

- Advertisement -
- Advertisement -

ಮಂಗಳೂರು: ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆಯಿತು. ‌

ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೊಂದಿಗೆ ವಿವರವಾದ ಚರ್ಚೆ ನಡೆಸಿದ ಸಂಸದ ಬ್ರಿಜೇಶ್ ಚೌಟ, ಮಳೆ ಬಿರುಸುಗೊಳ್ಳುವ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಗಳ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದರು.

ಅಲ್ಲದೇ, ಕಾಮಗಾರಿ ಹಂತದಲ್ಲಿರುವ ಎಲ್ಲಾ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ರೂಪುರೇಷೆಗಳನ್ನು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸಂಸದ ಚೌಟ ನಿರ್ದೇಶನ ನೀಡಿದರು.

- Advertisement -

Latest News

error: Content is protected !!