Monday, August 24, 2026
Homeತಾಜಾ ಸುದ್ದಿದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ; ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ; ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ

- Advertisement -
- Advertisement -

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಸೇರಿದಂತೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದೆ. ಹಾಗಾಗಿ ಇಂದು ಸಂಜೆ 4 ಗಂಟೆಗೆ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಇಂದು ದರ್ಶನ್ ಗ್ಯಾಂಗ್ ಜೈಲು ಸೇರೋದು ಫಿಕ್ಸ್ ಅಂತಾ ಹೇಳಲಾಗುತ್ತಿದೆ..

ಆರೋಪಿಗಳು ಕಳೆದ 10 ದಿನಗಳಿಂದ ಕಸ್ಟಡಿಯಲ್ಲಿದ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ.ಎರಡೂ ಬಾರಿ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸಿದ್ದಾರೆ. ಇಂದಿಗೆ ತನಿಖೆ ಬಹುತೇಕ ಅಂತ್ಯ ಹಿನ್ನಲೆ‌ ಜೈಲಿಗೆ ಕಳುಹಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ತನಿಖಾ ತಂಡ ಎಲ್ಲಾ 17 ಆರೋಪಿಗಳ ವಿಸ್ತೃತ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೇ ಆರೋಪಿಗಳಿಂದ ಸಾಕ್ಷ್ಯಗಳ ಪೊಲೀಸರು ಸಂಗ್ರಹಿಸಿದ್ದಾರೆ. ಜೊತೆಗೆ ಡಿಎನ್ಎ ಸೇರಿ ಎಲ್ಲಾ ವೈದ್ಯಕೀಯ ತಪಾಸಣೆ ನಡೆಸಲಾಗಿದೆ..ಹಾಗಾಗಿ ಇಂದು ಆರೋಪಿಗಳು ಪರಪ್ಪನ ಅಗ್ರಹಾರ ಸೇರೋದು ಬಹುತೇಕ ಫಿಕ್ಸ್ ಎನ್ನಲಾಗಿದೆ.

………

- Advertisement -

Latest News

error: Content is protected !!